ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Prasthutha|

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -


ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಅನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು.


ಜಲ್ಪೈಗುರಿಯಲ್ಲಿ ಪಂಚಾಯತ್ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು. ನಂತರ ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ತಲುಪಲು ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಸಿಲಿಗುರಿ ಸಮೀಪದ ಸೆವೋಕ್ ವಾಯು ನೆಲೆಯಲ್ಲಿ ಹೆಲಿಕಾಪ್ಟರ್ ಅನ್ನು ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಇದರಿಂದ ಸುರಕ್ಷಿತವಾಗಿ ಮಮತಾ ವಾಯು ನೆಲೆಯಲ್ಲಿ ಇಳಿದಿದ್ದು, ಅಲ್ಲಿಂದ ಅವರು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.