ಏಳನೇ ವೇತನ ಆಯೋಗದ ಅಧ್ಯಕ್ಷ, ಸದಸ್ಯರ ಜತೆ ಸಿಎಂ ಸಭೆ

Prasthutha|

ಬೆಂಗಳೂರು: ರಾಜ್ಯ ಸರಕಾರಿ ನೌಕರರ ಬಹುದಿನಗಳ ಆಶಯದ ಬೇಡಿಕೆ ಈಡೇರಿಕೆ ವಿಚಾರದಲ್ಲಿ ರಾಜ್ಯ ಸರಕಾರ ಒಂದು ಹೆಜ್ಜೆ ಮುಂದಿಟ್ಟಿದ್ದು, 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್‌ ರಾವ್‌ ಹಾಗೂ ಸದಸ್ಯರ ಜತೆಗೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಹತ್ವದ ಸಭೆ ನಡೆಸಿದರು.

- Advertisement -

ನವೆಂಬರ್‌ ತಿಂಗಳಲ್ಲಿ ಆಯೋಗ ವರದಿ ನೀಡಬಹುದೆಂಬ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ವರದಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಏಳನೇ ವೇತನ ಆಯೋಗದ ಜಾರಿಯಿಂದ ರಾಜ್ಯದ ಬೊಕ್ಕಸದ ಮೇಲೆ ಭಾರೀ ಹೊರೆ ಬೀಳುತ್ತದೆ ಎಂಬ ವಾದವಿದೆ. ಗ್ಯಾರಂಟಿಗಳ ಭಾರದಲ್ಲಿ ಸಿಲುಕಿರುವ ಕಾಂಗ್ರೆಸ್‌ ಸರಕಾರಕ್ಕೆ ವೇತನ ಆಯೋಗದ ಜಾರಿ ವಿಚಾರ ಇಕ್ಕಟ್ಟಾಗಿ ಪರಿಣಮಿಸಿದೆ.

ಸಭೆ ಬಳಿಕ ಮಾಧ್ಯಮಕ್ಕೆ ಯಾವುದೇ ಮಾಹಿತಿ ನೀಡಿಲ್ಲ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದ ರಾಜು, ನಜೀರ್‌ ಅಹ್ಮದ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ.ಅತೀಕ್‌, ಕಾರ್ಯದರ್ಶಿಗಳಾದ ಪಿ.ಸಿ. ಜಾಫ‌ರ್‌, ಡಾ| ಎಂ.ಟಿ. ರೇಜು ಉಪಸ್ಥಿತರಿದ್ದರು.

Join Whatsapp