ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಸಿಎಂ ಸೂಚನೆ ನೀಡಿದ್ದಾರೆ.
ಪ್ರಕರಣದ ಸಂಬಂಧ ಇಂದು ಸಭೆ ನಡೆಸಿದ ಸಿಎಂ, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರರಿಂದಲೂ ವರದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ಸಿಎಂ ಗೆ ಮಾಹಿತಿ ನೀಡಿದರು.