ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆಲಂಗಾಣದಿಂದ ಸ್ಪರ್ಧಿಸಬೇಕು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕವು ರಾಜ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ತೆಲಂಗಾಣಕ್ಕೆ ರಾಜ್ಯ ಸ್ಥಾನಮಾನ ನೀಡಿದ ತಾಯಿ ಎಂದು ಜನರು ನೋಡುವುದರಿಂದ ರಾಜ್ಯದಿಂದ ಸ್ಪರ್ಧಿಸಲು ವಿನಂತಿಸಲಾಗುತ್ತಿದೆ ಎಂದು ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.