ಬಾಬಾಬುಡನ್​ ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್| ಇದು ಅಪ್ಪಟ ಸುಳ್ಳು ಎಂದ ಸಿಎಂ ಸಿದ್ದರಾಮಯ್ಯ

Prasthutha|

- Advertisement -

ಬೆಂಗಳೂರು: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಅನ್ನೋದು ಅಪ್ಪಟ ಸುಳ್ಳು, ಇದು ತಪ್ಪು ಮಾಹಿತಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, 2017ರಲ್ಲಿ ದಾಖಲಾಗಿದ್ದ ಕೇಸ್​ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್​​ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.

- Advertisement -

ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಅನ್ನುವುದು ಸುಳ್ಳು. ಇದು ತಪ್ಪು, ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು. 2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಎಂದು ಸ್ಪಷ್ಟನೆ ನೀಡಿದ್ದಾರೆ.



Join Whatsapp
Exit mobile version