Home ಟಾಪ್ ಸುದ್ದಿಗಳು ದೆಹಲಿ ಕರ್ನಾಟಕ ಪ್ರತಿನಿಧಿಯಾಗಿ ಪ್ರಕಾಶ್ ಹುಕ್ಕೇರಿ ನೇಮಕ ; ಸಂಪುಟ ದರ್ಜೆ ಸಚಿವ ಸ್ಥಾನಮಾನ

ದೆಹಲಿ ಕರ್ನಾಟಕ ಪ್ರತಿನಿಧಿಯಾಗಿ ಪ್ರಕಾಶ್ ಹುಕ್ಕೇರಿ ನೇಮಕ ; ಸಂಪುಟ ದರ್ಜೆ ಸಚಿವ ಸ್ಥಾನಮಾನ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ನೇಮಕ ಮಾಡಲಾಗಿದೆ. ಪ್ರಕಾಶ್ ಹುಕ್ಕೇರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಲಾಗಿದೆ.

ಇತ್ತ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ನವದೆಹಲಿಯಲ್ಲಿನ ಕರ್ನಾಟಕ ರಾಜ್ಯದ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಲಾಗಿತ್ತು. ಇವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲಾಗಿತ್ತು.

Join Whatsapp
Exit mobile version