ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ: ಗುತ್ತಿಗೆದಾರರ ಸಂಘಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ

Prasthutha|

ಬೆಂಗಳೂರು: ‘ಗುತ್ತಿಗೆದಾರರಿಂದ ಕಮಿಷನ್ ವಸೂಲಿ ಮಾಡುವ ದಂಧೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ಸಂಪೂರ್ಣ ಕಡಿವಾಣ ಹಾಕುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

- Advertisement -

ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಮಾಡಿದ ನಿಯೋಗ, ಗುತ್ತಿಗೆದಾರರ ಸಮಸ್ಯೆಗಳ ಕುರಿತು ಚರ್ಚಿಸಿತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕಮಿಷನ್ ಹಾವಳಿ ಕುರಿತು ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ಪ್ರಸ್ತಾಪಿಸಿದ್ದು, ಅದನ್ನು ಮುಂದುವರಿಸಲು ಅವಕಾಶ ನೀಡದಂತೆ ಆಗ್ರಹಿಸಿದರು.
ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಹಿಂದಿನ ಸರ್ಕಾರದ ಅವಧಿಯಲ್ಲಿನ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಸಮಸ್ಯೆಯಾಗಿದೆ. ಅದನ್ನು ಸರಿಪಡಿಸಲು ಸ್ವಲ್ಪ ಕಾಲಾವಲಾಶ ಅಗತ್ಯ’ ಎಂದು ಹೇಳಿದ್ದಾರೆ.

ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.