ಗೌರವ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ

Prasthutha|

ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿಗಳನ್ನು ತಪ್ಪಿಸಲು ಝೀರೋ ಟ್ರಾಫಿಕ್ ನಿರಾಕಿರಿಸಿದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದಾರೆ. ನೀಡುವುದಾದರೆ ಪುಸ್ತಕ ನೀಡಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರವನ್ನು ನೆಟ್ಟಿಗರು ಸ್ವಾಗತಿಸಿದ್ದಾರೆ.

- Advertisement -

“ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದಿದ್ದರು. “ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಹೇಳಿದ್ದರು.

- Advertisement -

Join Whatsapp