ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

Prasthutha|

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

- Advertisement -


ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ವರನಟ ರಾಜ್ಕುಮಾರ್ ಮತ್ತು ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.


ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ದ್ವಾರಕೀಶ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Join Whatsapp