ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.