ಸರ್ಕಾರ V/s ರಾಜಭವನ ಸಂಘರ್ಷ: ಹೈಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಇದರ ವಿರುದ್ಧ ಸಿದ್ದರಾಮಯ್ಯ ಅವರು ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -


ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವರ್ಸಸ್ ರಾಜಭವನದ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.


ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

- Advertisement -


ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.



Join Whatsapp