Home ಟಾಪ್ ಸುದ್ದಿಗಳು ಸರ್ಕಾರ V/s ರಾಜಭವನ ಸಂಘರ್ಷ: ಹೈಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಸರ್ಕಾರ V/s ರಾಜಭವನ ಸಂಘರ್ಷ: ಹೈಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಇದರ ವಿರುದ್ಧ ಸಿದ್ದರಾಮಯ್ಯ ಅವರು ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವರ್ಸಸ್ ರಾಜಭವನದ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.


ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.


ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.

Join Whatsapp
Exit mobile version