Home ಟಾಪ್ ಸುದ್ದಿಗಳು ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

ಲೀಲಾವತಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇದೀಗ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಅವರು ಲೀಲಾವತಿ ಅಂತಿಮ ದರ್ಶನ ಪಡೆದಿದ್ದಾರೆ. ನಿನ್ನೆ (ಡಿ.8) ಲೀಲಾವತಿ ನಿಧನದ ಸುದ್ದಿ ಕೇಳ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದರು.

ಇಂದು (ಡಿ.9) ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಈ ವೇಳೆ, ವಿನೋದ್ ರಾಜ್ ಭೇಟಿಯಾಗಿ ಸಿದ್ದರಾಮಯ್ಯ ಅವರು ಸಂತೈಸಿ ಧೈರ್ಯ ತುಂಬಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಲೀಲಾವತಿ ಅಂತಿಮ ದರ್ಶನದ ಬಳಿಕ ವಿನೋದ್ ರಾಜ್ ಗೆ ಸಾಂತ್ವನ ಹೇಳಿದ್ದಾರೆ.

Join Whatsapp
Exit mobile version