ನವದೆಹಲಿ: ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ‘ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪ ಮೋರ್ಯ’ ಎಂದು ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ.
ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣೇಶನೆಂದರೆ ವಿಘ್ನ ನಿವಾರಕ, ಸಂಕಟ ಹರಣ. ಈ ಗಣೇಶ ಚತುರ್ಥಿಯು ನಿಮ್ಮ ಬದುಕಿನಲ್ಲಿ ಯಶಸ್ಸು ಮತ್ತು ಶುಭವನ್ನು ತರಲಿ ಹಾಗೂ ಗಣಪನ ಕೃಪೆ ಎಲ್ಲರ ಮೇಲಿರಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.