ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
ಅನ್ನಭಾಗ್ಯದಲ್ಲಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗದ ಹಿನ್ನೆಲೆ ಅದರ ಬದಲು ಪ್ರತಿ ಕೆಜಿಗೆ 34ರೂ.ನಂತೆ ಒಟ್ಟು 170 ರೂ.ವನ್ನು ಕುಟುಂಬ ಸದಸ್ಯರ ಖಾತೆಗೆ ಜಮೆ ಮಾಡಲಾಗುವುದು. ಈ ಯೋಜನೆಗೆ ಒಟ್ಟು 1.28 ಕೋಟಿ ಕಾರ್ಡ್ದಾರರು ಅರ್ಹರಿದ್ದಾರೆ.