Home ಟಾಪ್ ಸುದ್ದಿಗಳು ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಚಾಲನೆ ನೀಡಿದರು.


ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.


ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು.

ಮೊದಲ ತಿಂಗಳಲ್ಲಿ 1.42 ಕೋಟಿ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲಿದ್ದು, ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ವಿನಾಯಿತಿ ಸಿಗಲಿದೆ ಎಂದು ತಿಳಿದು ಬಂದಿದೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್ ನಲ್ಲಿ ಪ್ರಯೋಜನ ಸಿಗಲಿದೆ ಎಂದು ಈ ಹಿಂದೆಯೇ ಮಾಹಿತಿ ನೀಡಲಾಗಿತ್ತು.

Join Whatsapp
Exit mobile version