‘ಪಲ್ಲಕ್ಕಿ’ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಪಲ್ಲಕ್ಕಿ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.

- Advertisement -


ಒಟ್ಟು 148 ಬಸ್ ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್ ಗಳು ಒಳಗೊಂಡಿವೆ. 40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್ ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಉಳಿದ 100 ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

Join Whatsapp