Home ಟಾಪ್ ಸುದ್ದಿಗಳು ಅಮಿತ್ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಅಮಿತ್ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರದ ಬಗ್ಗೆ ಮಾತುಕತೆ ನಡೆಸಿದ್ದು, ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲೂಕುಗಳಲ್ಲಿ 223 ತಾಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು. ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

Join Whatsapp
Exit mobile version