ದೆಹಲಿ: ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.
ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.