ಬೆಂಗಳೂರು: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ನಾಯಕರಿಗೆ ದಂಡ ವಿಧಲಾಗಿತ್ತು. ಅಲ್ಲದೆ, ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.
2022ರ ಏಪ್ರಿಲ್ ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ಪ್ರಕರಣ ಅದಾಗಿತ್ತು. ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು.
ನಮ್ಮ ಪ್ರತಿಭಟನೆ ಕಾನೂನು ಬದ್ಧವಾಗಿತ್ತು ಎಂದಿರುವ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.