Home ಟಾಪ್ ಸುದ್ದಿಗಳು ರೈತರ ತಲೆ ಮೇಲೆ ಸಿಎಂ ಸಿದ್ದರಾಮಯ್ಯ ಟೋಪಿ ಹಾಕುತ್ತಾರೆ: ಆರ್. ಅಶೋಕ್

ರೈತರ ತಲೆ ಮೇಲೆ ಸಿಎಂ ಸಿದ್ದರಾಮಯ್ಯ ಟೋಪಿ ಹಾಕುತ್ತಾರೆ: ಆರ್. ಅಶೋಕ್

ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.


ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಗರದ ಕೆ.ಆರ್.ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್ ಅಹಮದ್ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್ ಬೋರ್ಡ್ ಗೆ ಹೆಚ್ಚು ಅಧಿಕಾರ ನೀಡಿತು. ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ ₹10 ಸಾವಿರ ಕೋಟಿ ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ್ದಾರೆ. ಕಾಂಗ್ರೆಸ್ಗೆ ಹಿಂದೂಗಳು ಮತ ನೀಡಿಲ್ಲವೇ? ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ? ಎಂದು ಪ್ರಶ್ನಿಸಿದರು.

Join Whatsapp
Exit mobile version