ಮೈಸೂರು: ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿಂದು ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡ ಸಿಎಂ ಸಿದ್ದರಾಮಯ್ಯ

Prasthutha|

ಮೈಸೂರು: ಮೈಸೂರಿನ ಪ್ರಸಿದ್ಧ ಮೈಲಾರಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಂಡಿ ತಿಂದು ತಮ್ಮ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

- Advertisement -

ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, “ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ” ಎಂದು ಹೇಳಿದ್ದಾರೆ. “ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು” ಎಂದು ಅಭಿಪ್ರಾಯಿಸಿದ್ದಾರೆ.

Join Whatsapp