ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಹೆಸರು ಕೇಳಿಬಂದಿರುವುದರಿಂದ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಇದೀಗ ಸಿಎಂ ಅದನ್ನು ಅಲ್ಲಗಳೆದಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಸ್ ಐಟಿ ರಚನೆಯಾಗಿ ಇನ್ನೂ ಎರಡು ದಿವಸ ಆಗಿದೆಯಷ್ಟೆ. ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ವರದಿ ನೀಡಿಲ್ಲ ಎಂದರು.
ಸಿಎಂಗೆ ನಾಗೇಂದ್ರ ಬೆದರಿಕೆಯೊಡ್ಡಿದ್ದಾರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಬೆದರಿಕೆಯೂ ಇಲ್ಲವೆಂದರು. ಸಚಿವ ನಾಗೇಂದ್ರ ಬಳಿಯಿಂದ ನಾವು ಯಾವುದೇ ವಿವರಣೆ ಕೇಳಿಲ್ಲ. ರಾಜೀನಾಮೆಗೆ ಗಡುವು ಕೊಡಲು ಬಿಜೆಪಿಗರು ಯಾರು? ವಿಪಕ್ಷ ಇರುವುದು ಹೋರಾಟ ಮಾಡಲು ಎಂದು ಸಿದ್ದರಾಮಯ್ಯ ಹೇಳಿದರು.