ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಗಳಿಗೆ ಬ್ರೇಕ್: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ಸುಮಾರು 40ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು. ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಅವರು ತಿಳಿಸಿದರು.


ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.