ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಹೈಡ್ರಾಮಾ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವು ನಾಯಕರು ವಿಚಾರಿಸಿದರು.
ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ್ದಾರೆ.
ಯತ್ನಾಳ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಯತ್ನಾಳ್ ಅವರು ದೊಡ್ಡ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ. ಸದ್ಯ ಅವರು ಸ್ಥಿರವಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಿ ಕೊಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದರು.