ಆ.3ರಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ

Prasthutha|

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 3ರಂದು 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

- Advertisement -


ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಜ್ಯದ ಯೋಜನೆಗಳು, ಅನುದಾನ ಸಂಬಂಧ ಬೇಡಿಕೆ ಇಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ.


ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ ಜೊತೆಗೆ ನೀರಾವರಿ ಯೋಜನೆಗಳಿಗೆ ಅನುದಾನ, ಜಲಜೀವನ್ ಮಿಷನ್, ನರೇಗಾಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಸಿದ್ದರಾಮಯ್ಯ ಕೋರಲಿದ್ದಾರೆ.

Join Whatsapp