ಬೆಂಗಳೂರು: ಮಂಗಳವಾರದಿಂದ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನಿ ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಗಳ ಕುರಿತು ಚರ್ಚಿಸಲಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವರ ಬೇಟಿಗೆ ಸಿಎಂ ಸಿದ್ದರಾಮಯ್ಯ ನಾಲ್ಕು ಬಾರಿ ಪತ್ರ ಬರೆದು ಮನವಿ ಮಾಡಿದ್ದರು, ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯಾವಕಾಶ ನೀಡಿದ್ದಾರೆ.