ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಗೃಹ ಸಚಿವ ಅಮಿತ್ ಶಾ ಮತ್ತು ಇತರ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಲಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕೇಂದ್ರ ಸರಕಾರ ನಿರಾಕರಿಸುತ್ತಿದ್ದು, ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಸಚಿವ ಸಂಪುಟದ ಸಹೋದ್ಯೋಗಿ ಗಳು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ.