77ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

Prasthutha|

ಬೆಂಗಳೂರು:  ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

- Advertisement -

ಬಳಿಕ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಬೃಹತ್ ಪಥಸಂಚಲನ

- Advertisement -

ಪಂಥಸಂಚಲನದಲ್ಲಿ ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಮ್ ಗಾರ್ಡ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ಯಾಡ್ ಮತ್ತು ಬ್ಯಾಂಡ್ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಿದ್ದಾರೆ.

Join Whatsapp