ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

- Advertisement -

ಸುಸ್ತು, ಬಳಲಿಕೆಯಿಂದಾಗಿ ಹೆಚ್‌ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಕೂಡ ಸಿಎಂ ಜೊತೆಗಿದ್ದರು.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಆಗಿದ್ದು, ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್‌ ಆಗುವ ಸಾಧ್ಯತೆ ಇದೆ.

- Advertisement -

ತಂದೆ ಆರೋಗ್ಯ ಸ್ಥಿರವಾಗಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರೂ ಕೂಡ ಆತಂಕಕ್ಕೆ ಒಳಗಾಗೋದು ಬೇಡ ಅಂತ ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.



Join Whatsapp