ಗುರಿ ಸಾಧಿಸದೇ ಇದ್ದರೆ ಶಿಸ್ತು ಕ್ರಮ: ವಾಣಿಜ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Prasthutha|

ಬೆಂಗಳೂರು: ಗುರಿ ಸಾಧಿಸದೇ ಇದ್ದರೆ ವಾಣಿಜ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

- Advertisement -


ವಿಧಾನಸೌಧದಲ್ಲಿ ವಾಣಿಜ್ಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಗುರಿ ಸಾಧನೆ ಬಗ್ಗೆ ಸೂಚನೆ ನೀಡಿದ್ದಾರೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕುವುದಿಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಬೇಕು. ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. IGST ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು. ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ. ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗದಿಪಡಿಸಲು ಸೂಚನೆ ನೀಡಿದ್ದಾರೆ.

Join Whatsapp