Home ಟಾಪ್ ಸುದ್ದಿಗಳು ಅಶ್ವಮೇಧ ಬಸ್‍ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಅಶ್ವಮೇಧ ಬಸ್‍ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ಅಶ್ವಮೇಧ ಕ್ಲಾಸಿಕ್ ಹೊಸ ವಿನ್ಯಾಸದ ಬಸ್‍ಗಳಿಗೆ ಇಂದು (5.2.2024) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

KSRTCಯ ಅಶ್ವಮೇಧ ಹೊಸ ವಿನ್ಯಾಸದ 800 ಬಸ್‍ಗಳನ್ನು ಮೇ ಅಂತ್ಯದೊಳಗೆ ಸಾರ್ವಜನಿಕ ಸೇವೆಗೆ ಒದಗಿಸಲು ಉದ್ದೇಶಿಸಿಸಲಾಗಿದೆ. ಮೊದಲ ಹಂತದಲ್ಲಿ ಇಂದು ನೂರು ಬಸ್‍ಗಳಿಗೆ ವಿಧಾನಸೌಧ ಮುಂಭಾಗ ಚಾಲನೆ ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಎಸ್‍ಆರ್‍ಟಿಸಿಯ ಹಿರಿಯ ಅಕಾರಿಗಳು ಭಾಗವಹಿಸಲಿದ್ದಾರೆ ಎಂದು KSRTC ಪ್ರಕಟಣೆ ತಿಳಿಸಿದೆ.

Join Whatsapp
Exit mobile version