ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆಯ ಕಾಂಗ್ರೆಸ್ ಶಾಸಕರ ಮನೆಗೆ ಭೇಟಿ ನೀಡಿದ ಬಳಿಕ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಡಿಕೇರಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ಪಿ ಕಛೇರಿಯನ್ನು ಉದ್ಘಾಟಿಸಲಿದ್ದಾರೆ.
ನಂತರ ವಿರಾಜಪೇಟೆ, ಮಡಿಕೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಎನ್‌ಎಸ್ ಬೋಸರಾಜು ಸಾಥ್ ನೀಡಲಿದ್ದಾರೆ ಅದರಂತೆ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಹಿಂದಿರುಗಲಿದ್ದಾರೆ