ಬೆಂಗಳೂರು: ‘ಯುವನಿಧಿ’ ಯೋಜನೆ ನೋಂದಣಿಗೆ ಇದೇ ಡಿಸೆಂಬರ್ 26ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿ.26ರಂದು ಯುವನಿಧಿ ಯೋಜನೆಯ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಲಿದ್ದಾರೆ. 2024 ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ಶಿವಮೊಗ್ಗದಲ್ಲಿ ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.