ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ | ಸಿಎಂ ಘೋಷಣೆ
Prasthutha: June 14, 2021

ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಮುಖ್ಯಮಂತ್ರಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಒಂದು ಕುಟುಂಬದಲ್ಲಿ ಹಲವರು ಮೃತಪಟ್ಟಿದ್ದರೂ, ದುಡಿಯುವ ವ್ಯಕ್ತಿಯನ್ನು ಮಾತ್ರ ಪರಿಗಣಿಸಿ ಒಂದು ಲಕ್ಷ ರೂ. ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಬಿಪಿಎಲ್ ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಮಾತ್ರ ಇದು ಅನ್ವಯವಾಗಲಿದೆ ಎಂದು ಅವರು ತಿಳಿಸಿದರು.
