ಬಾಗಲಕೋಟೆ: ಸಿಎಂ ಆಯ್ಕೆಯಾಗಬೇಕಾಗಿದ್ದು ಶಾಸಕಾಂಗ ಪಕ್ಷದ ಸಭೆಯಲ್ಲಿ ಎಂದು ಹೇಳುವ ಮೂಲಕ ಸ್ವಾಮೀಜಿಗಳ ಹೇಳಿಕೆಗೆ ಸಚಿವ ಆರ್.ಬಿ.ತಿಮ್ಮಾಪೂರ್ ಅವರು ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸ್ವಾಮೀಜಿಗಳು ಯಾರು ಯಾರಿಗೆ ಆಶೀರ್ವಾದ ಮಾಡ್ತಾರೆ, ಮಾಡಲಿ. ಆದ್ರೆ ಸಿಎಂ ಆಯ್ಕೆ ನಡೆಯುವುದು ಶಾಸಕಾಂಗ ಪಕ್ಷದ ಸಭೆಯಲ್ಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನ್ನದೇ ಆದ ಮಹತ್ವ ವಿದೆ. ಇಲ್ಲಿ ನನ್ನ ನಿಮ್ಮ ಅಭಿಪ್ರಾಯಗಳು ಗೌನ ಆಗ್ತಾವೆ. ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆಯ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.
ಮಠಾಧೀಶರು ರಾಜಕೀಯ ಬಗ್ಗೆ ಚರ್ಚಿಸುವುದು ಎಷ್ಟು ಸೂಕ್ತ ಎಂಬುದನ್ನು ಅವರೇ ಅರಿಯಬೇಕು. ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಸಿಎಂ ಇದ್ದಾರೆ. ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದರು.