Home ಟಾಪ್ ಸುದ್ದಿಗಳು ನಾಳೆ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢಕ್ಕೆ ಸಿಎಂ ಹೆಸರು ಘೋಷಣೆ ಸಾಧ್ಯತೆ

ನಾಳೆ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢಕ್ಕೆ ಸಿಎಂ ಹೆಸರು ಘೋಷಣೆ ಸಾಧ್ಯತೆ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಸಾಧಿಸಿರುವ ಬಿಜೆಪಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಡೆಸುತ್ತಿದೆ. ನಾಳೆ ನಡೆಯುವ ಶಾಸಕಾಂಗ ಸಭೆಯಲ್ಲಿ ಮೂರೂ ರಾಜ್ಯಗಳ ಸಿಎಂ ಹೆಸರು ಘೋಷಿಸುವ ಸಾಧ್ಯತೆ ಇದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ರಾಜಸ್ಥಾನಕ್ಕೆ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದರೆ, ಮಧ್ಯಪ್ರದೇಶಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಛತ್ತೀಸ್ಗಢಕ್ಕೆ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ನೇಮಿಸಲಾಗಿದೆ.

Join Whatsapp
Exit mobile version