ಬೆಂಗಳೂರು: ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ ಬಂದಿಲ್ಲ. ಸಿಎಂ ಪತ್ನಿ ಅವರ ದಾಖಲಾತಿ ತಿದ್ದುಪಡಿ ಆಗಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ನೀಡಿದ್ದಾರೆ.
ಹೆಲಿಕಾಪ್ಟರ್ ನಲ್ಲಿ ಹೋಗಿ ಬಂದವರು ದಾಖಲಾತಿ ತಿದ್ದಿರಬಹುದು ಎಂಬ ಕುಮಾರಸ್ವಾಮಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ದಾಖಲೆ ತಿದ್ದುವಂತ ಪರಿಸ್ಥಿತಿ ನಮಗೆ ಬಂದಿಲ್ಲ. ಅಂತಹ ನೀಚ ಕೆಲಸಕ್ಕೆ ನಾವ್ಯಾರೂ ಇಳಿದಿಲ್ಲ. ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಅಲ್ಲಿ ಬೇರೇನೋ ಆಗಿದೆ ಅನ್ನೋದು ಅಲ್ಲ. ಇದು ನಮ್ಮ ಪೋರ್ಟ್ ಪೊಲೀಯೋ ಅಲ್ಲ. ಏನು ತಪ್ಪಾಗೋದೆ ಇಲ್ವಾ ಎಂದು ಪ್ರಶ್ನಿಸಿದ್ದಾರೆ.
ಜಮೀನಿಗೆ ಪರಿಹಾರ ನೀಡಿಲ್ಲ. ಅಷ್ಟೇ ವಿಸ್ತೀರ್ಣದ ಜಮೀನು ಎಂದು ಹೇಳಿದ್ದಾರೆ. ಅಲ್ಲಿ ವರ್ಷ ತಪ್ಪಾಗಿರಬಹುದು. ಇಲ್ಲವೇ ಸಮಾನಾಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ ಎಂದು ಬಹಳ ಸ್ಪಷ್ಟವಾಗಿಯೇ ಹೇಳಿದ್ದಾರೆ. ವಿಜಯನಗರ ಲೇಔಟ್ ಅಲ್ಲಿ ಅಂತ ಎಲ್ಲಿ ಬರೆದಿದ್ದಾರೆ? ಸಮಾನಾಂತರ ಜಾಗದಲ್ಲಿ ಅಂತ ಬರೆದಿದ್ದಾರೆ ಎಂದು ಹೇಳಿದ್ದಾರೆ.