ಸಹಕಾರ ಕ್ಷೇತ್ರವನ್ನು ಎಲ್ಲ ರಂಗಗಳಲ್ಲಿ ವಿಸ್ತರಿಸಬೇಕು :ಸಿ ಎಂ ಬೊಮ್ಮಾಯಿ

Prasthutha|

ಬೆಂಗಳೂರು: ನಾವೆಲ್ಲರೂ ಸೇರಿ ಸಹಕಾರಿ ಕ್ಷೇತ್ರ ನಿಯಂತ್ರಿಸುವಲ್ಲಿ ನಿರತರಾಗಿದ್ದೇವೆ. ಆದರೆ ಅನ್ಯರಾಜ್ಯಗಳಲ್ಲಿ ಸಹಕಾರಿ ರಂಗವು ಅಲ್ಲಿನ ಸರಕಾರಗಳನ್ನೇ ನಿಯಂತ್ರಿಸುವಷ್ಟರ ಮಟ್ಟಿಗೆ ಬಲಿಷ್ಠವಾಗಿ ಬೆಳೆದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಕೆಂಗೇರಿಯಲ್ಲಿ ರವಿವಾರ ರಾಜ್ಯ ಸಹಕಾರ ವಸತಿ ಮಹಾಮಂಡಳ ಮತ್ತು ಸಹಕಾರ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ “ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಹಕಾರವನ್ನು ಎಲ್ಲ ರಂಗಗಳಲ್ಲಿ ವಿಸ್ತರಿಸಲು ಅವಕಾಶಗಳಿವೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ಆಗಬೇಕಿದೆ ಎಂದು ಹೇಳಿದರು.

ಸಹಕಾರಿ ಸಾಹುಕಾರ ಪದ್ಧತಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದ್ದು, ಇದು ಕೊನೆಗೊಳ್ಳಬೇಕು. ಈ ನಿಟ್ಟಿನಲ್ಲಿ ಸರಕಾರವು ಸಹಕಾರಿ ಸಂಘಗಳಲ್ಲಿ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸುವುದರ ಜತೆಗೆ ಆ ನೋಂದಣಿ ಶುಲ್ಕವನ್ನೂ ಸರಕಾರ ಭರಿಸಲು ಉದ್ದೇಶಿಸಿದೆ ಎಂದು ತಿಳಿಸಿದರು.

- Advertisement -

ರಾಜ್ಯದ ಪ್ರತಿ ತಾಲೂಕಿನಲ್ಲೂ ವಿವಿಧೋದ್ದೇಶ ಮಹಿಳಾ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರಕಾರ ನಿರ್ಧರಿಸಿದ್ದು, ಇದಕ್ಕಾಗಿ ಶೇ. 90ರಷ್ಟು ಷೇರು ಬಂಡವಾಳವನ್ನೂ ಸ್ವತಃ ಸರಕಾರ ನೀಡಲಿದೆ . ಇದಲ್ಲದೆ, ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಸ್ಥಾಪನೆಗೆ ಸರಕಾರ ನಿರ್ಧಾರ ಮಾಡಿದೆ ಎಂದು ಬೊಮ್ಮಾಯಿ ತಿಳಿಸಿದರು.



Join Whatsapp