ಕಲ್ಲಿದ್ದಲು ಹಗರಣ: ಪಶ್ಚಿಮ ಬಂಗಾಳ ಸಚಿವ ಮೊಲೊಯ್ ಘಾಟಕ್ ನಿವಾಸಗಳ ಮೇಲೆ ಸಿಬಿಐ ದಾಳಿ

Prasthutha|

ಕೋಲ್ಕತ್ತಾ: ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಕಾನೂನು ಸಚಿವ ಮೊಯೊಯ್ ಘಾಟಕ್ ಅವರ ನಿವಾಸಗಳ ಮೇಲೆ ಸಿಬಿಐ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಪಶ್ಚಿಮ ಬರ್ಧಮಾನ್ ಜಿಲ್ಲೆಯ ಅಸನ್ಸೋಲ್’ನಲ್ಲಿರುವ ಘಟಕ್’ನ ಮೂರು ಮನೆಗಳು ಮತ್ತು ಕೋಲ್ಕತ್ತಾದ ಲೇಕ್ ಗಾರ್ಡನ್ಸ್ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅರೆಸೇನಾ ಸಿಬ್ಬಂದಿಯನ್ನೊಳಗೊಂಡ ತಂಡದಿಂದ ನೆರವು ಪಡೆದ ಸಿಬಿಐ ಸಂಸ್ಥೆ ಘಾಟಕ್ ಅವರಿಗೆ ಸಂಸ್ಥೆಗಳಲ್ಲಿ ಶೋಧ ನಡೆಸಿದೆ. ಈ ಸಂದರ್ಭದಲ್ಲಿ ಮಹಿಳಾ ಅಧಿಕಾರಿಗಳು ಕೂಡ ಸಿಬಿಐ ತಂಡದ ಭಾಗಿಯಾಗಿದ್ದರು.

- Advertisement -

ಕಲ್ಲಿದ್ದಲು ಕಳ್ಳಸಾಗಣೆ ಹಗರಣದಲ್ಲಿ ಅವರ ಹೆಸರು ಕೇಳಿ ಬರುತ್ತಿದ್ದಂತೆ, ಇದರಲ್ಲಿ ಅವರ ಪಾತ್ರವೇನು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಹಗರಣದಲ್ಲಿ ಘಾಟಕ್ ಅವರು ಭಾಗಿಯಾಗಿರುವ ಕುರಿತು ನಮ್ಮಲ್ಲಿ ಪುರಾವೆಗಳಿವೆ ಎಂದು ಸಿಬಿಐ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ದಾಳಿಯ ವೇಳೆ ಘಾಟಕ್ ಅವರು ಮನೆಯಲ್ಲಿರಲಿಲ್ಲ. ಹಗರಣಕ್ಕೆ ಸಂಬಂಧಿಸಿದಂತೆ ಸಂಸ್ಥೆ ಕೋಲ್ಕತ್ತಾದ ನಾಲ್ಕು ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp