2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ: ಸಂಜತ್ ರಾವತ್

Prasthutha|

ಪುಣೆ: 2024 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ದೇಶದಲ್ಲಿರುವ ನಿರಂಕುಶ ಆಡಳಿತವನ್ನು ಕೊನೆಗೊಳ್ಳಲಿದೆ ಎಂದು ಅವರು ತಿಳಿಸಿದರು.

- Advertisement -

ಪುಣೆ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರಸಕ್ತ ದೇಶದ ಜನತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದು, ಕಾಂಗ್ರೆಸ್ ನ ಸಹಕಾರವಿಲ್ಲದೆ ಯಾವುದೇ ಸರ್ಕಾರಗಳು ರಚನೆಯಾಗುವುದಿಲ್ಲ. ಪ್ರಸಕ್ತ ರಾಷ್ಟ್ರ ರಾಜಕೀಯದಲ್ಲಿ ಕಾಂಗ್ರೆಸ್ ಮಾತ್ರವೇ ಪ್ರಬಲ ಪ್ರತಿಪಕ್ಷ ಸ್ಥಾನವನ್ನು ನಿಭಾಯಿಸುತ್ತಿದ್ದು, ಉಳಿದವು ಪ್ರಾದೇಶಿಕ ಪಕ್ಷಗಳಾಗಿವೆ ಎಂದು ತಿಳಿಸಿದರು.

- Advertisement -

ಬಿಜೆಪಿ ಹಲವು ದಶಕಗಳ ಕಾಲ ಅಧಿಕಾರದಲ್ಲಿ ಉಳಿಯುತ್ತದೆ ಎಂಬ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಂಜಯ್ ರಾವತ್ ಸದ್ಯದಲ್ಲೇ ಬಿಜೆಪಿ ವಿರೋಧ ಪಕ್ಷದ ಸ್ಥಾನವನ್ನು ಅಲಂಕರಿಸುವುದನ್ನು ತಾವು ಕಾಣಲಿದ್ದೀರಿ. ಬಿಜೆಪಿಯನ್ನು ಬೃಹತ್ ಪಕ್ಷವೆಂದು ಕರೆಯುವ ನೀವು, ಮುಂಬೈಯಲ್ಲಿ ಬೃಹತ್ ಪಕ್ಷ 105 ಶಾಸಕರೊಂದಿಗೆ ವಿರೋಧ ಪಕ್ಷದ ಜವಬ್ದಾರಿಯನ್ನು ನಿಭಾಯಿಸುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಬೇರ್ಪಟ್ಟ ಶಿವಸೇನೆಯು ಮಿತ್ರಪಕ್ಷಗಳಾದ ಎನ್.ಸಿ.ಪಿ ಮತ್ತು ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲಿದೆ ಎಂದು ತಿಳಿಸಿದರು.



Join Whatsapp