ಮಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.