ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕೈದಯ ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಸುಳಿವಿಲ್ಲ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.