ಮಂಗಳೂರು: ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದಾರೆ.
ಬಿಜೈ ,ಮಿಲಾಗ್ರೀಸ್ ಸೇರಿ ನಗರದ ಎಲ್ಲಾ ಚರ್ಚ್ ಗಳಲ್ಲಿ ಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯ ಬಹುತೇಕ ಚರ್ಚ್ ಗಳಲ್ಲಿ ಏಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ಘಟನೆಗಳನ್ನು ಪ್ರಸ್ತುತ ಪಡಿಸಲಾಯಿತು. ಶಿಲುಬೆಯ ಶಿಲುಬೆಯ ಹಾದಿಯ 14 ಪ್ರಮುಖ ಘಟ್ಟಗಳನ್ನು ನೆನಪಿಸಿ ಧ್ಯಾನಿಸಿ ಪ್ರಾರ್ಥನೆ ನಡೆಯಿತು.