ಕೊಯಮತ್ತೂರು ಕಾರು ಸ್ಫೋಟ ಹಿನ್ನೆಲೆ; ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಎನ್‌ಐಎ ದಾಳಿ

Prasthutha|

ಚೆನ್ನೈ:  ಕೊಯಮತ್ತೂರಿನಲ್ಲಿ ನಡೆದ  ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಚೆನ್ನೈ, ಮಧುರೈ ಸೇರಿದಂತೆ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

- Advertisement -

ಕೊಯಮತ್ತೂರಿನಲ್ಲಿ 20, ಚೆನ್ನೈಯಲ್ಲಿ 12ಕ್ಕೂ ಹೆಚ್ಚು ಮತ್ತು ಮುಧುರೈ, ರಾಮನಾಥಪುರಂ ಸೇರಿದಂತೆ ರಾಜ್ಯದ ಹಲವೆಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ಟೋಬರ್ 23ರಂದು ಕೊಯಮತ್ತೂರಿನ ಉಕ್ಕಡಂ ದೇವಾಲಯದ ಬಳಿ ಕಾರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಅದರಲ್ಲಿದ್ದ ಜಮೀಶ್ ಮುಬೀನ್ ಎಂಬಾತ ಮೃತಪಟ್ಟಿದ್ದ. ಘಟನೆಯಲ್ಲಿ ಮುಬೀನ್ ನಂಟು ಹಾಗೂ ಭಯೋತ್ಪಾದನಾ ಕೃತ್ಯದ ಸಂಚು ಕುರಿತಾಗಿ ತನಿಖೆ ನಡೆಸಲಾಗುತ್ತಿದೆ.

- Advertisement -

ತಮಿಳುನಾಡು ಸರ್ಕಾರದ ಶಿಫಾರಸಿನಂತೆ ಅಕ್ಟೋಬರ್ 27ರಂದು ಪ್ರಕರಣವನ್ನು ಕೇಂದ್ರ ಸರ್ಕಾರವು ಎನ್‌ಐಎಗೆ ವರ್ಗಾಯಿಸಿತ್ತು. ಎನ್‌ಐಎ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಎರಡು ವಾರದೊಳಗೆ ನಡೆಸಿರುವ ಮೊದಲ ಶೋಧ ಕಾರ್ಯಾಚರಣೆಯಾಗಿದೆ.

Join Whatsapp