ತಮಿಳುನಾಡು: ಅಕ್ಟೋಬರ್ 23 ರಂದು ಕೊಯಮತ್ತೂರಿನಲ್ಲಿ ಕಾರಿನಲ್ಲಿ ಸಂಭವಿಸಿದ LPG ಸಿಲಿಂಡರ್ ಸ್ಫೋಟದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣ ದಾಖಲಿಸಿದೆ.
ಕಾರಿನಲ್ಲಿ LPG ಸಿಲಿಂಡರ್ ಸ್ಫೋಟ ಸಂಭವಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರನ್ನು ಗುರುತಿಸಿದ್ದು, ಕೆಲವೇ ದಿನಗಳಲ್ಲಿ ದುರಂತಕ್ಕೆ ಕಾರಣವಾದ ಸತ್ಯಾಂಶಗಳನ್ನು ಬಹಿರಂಗಪಡಿಸುತ್ತೇವೆ. ಈಗಾಗಲೇ ಆರು ಮಂದಿಯನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಡಿಜಿಪಿ ಸೈಲೇಂದ್ರ ಬಾಬು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈವರಗೆ ಆರು ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರನ್ನು ಮೊಹಮ್ಮದ್ ಅಜರುದ್ದೀನ್ (25), ಮೊಹಮ್ಮದ್ ರಿಯಾಜ್ (27), ಮೊಹಮ್ಮದ್ ತಲ್ಕಾ (25), ಮೊಹಮ್ಮದ್ ನವಾಜ್ ಇಸ್ಮಾಯಿಲ್(27) ಮತ್ತು ಫಿರೋಜ್ ಇಸ್ಮಾಯಿಲ್ (27) ಎಂದು ಗುರುತಿಸಲಾಗಿದೆ.