ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಶಿಫಾರಸು ಮಾಡಿದ ತಮಿಳುನಾಡು

Prasthutha|

ಚೆನ್ನೈ: ಕೊಯಮತ್ತೂರು ಜಿಲ್ಲೆಯ ಉಕ್ಕಡಂನ ದೇವಾಲಯದ ಬಳಿ ಎಲ್ಪಿಜಿ ಸಿಲಿಂಡರ್ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಗೆ ತಮಿಳುನಾಡು ಶಿಫಾರಸು ಮಾಡಲಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ತಿಳಿಸಿದ್ದಾರೆ.

- Advertisement -

ಘಟನೆಯ ಸಂಭಾವ್ಯ ಆಯಾಮಗಳು ಮತ್ತು ರಾಜ್ಯದಾಚೆಗಿನ ಸಂಪರ್ಕಗಳನ್ನು ಪರಿಗಣಿಸಿ ಕೇಂದ್ರ ಏಜೆನ್ಸಿಗೆ ತನಿಖೆಯನ್ನು ಹಸ್ತಾಂತರಿಸುವ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಕೊಯಮತ್ತೂರಿನ ದೇವಾಲಯವೊಂದರ ಮುಂದೆ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ 25 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
.
ಸ್ಫೋಟ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯನ್ನು ಬಳಸಲಾಗಿದೆ, ಅಲ್ಲದೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತನ ಮನೆಯಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಐವರನ್ನು ಬಂಧಿಸಲಾಗಿದೆ



Join Whatsapp