Home ಟಾಪ್ ಸುದ್ದಿಗಳು ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಶಿಫಾರಸು ಮಾಡಿದ ತಮಿಳುನಾಡು

ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಶಿಫಾರಸು ಮಾಡಿದ ತಮಿಳುನಾಡು

ಚೆನ್ನೈ: ಕೊಯಮತ್ತೂರು ಜಿಲ್ಲೆಯ ಉಕ್ಕಡಂನ ದೇವಾಲಯದ ಬಳಿ ಎಲ್ಪಿಜಿ ಸಿಲಿಂಡರ್ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಗೆ ತಮಿಳುನಾಡು ಶಿಫಾರಸು ಮಾಡಲಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ತಿಳಿಸಿದ್ದಾರೆ.

ಘಟನೆಯ ಸಂಭಾವ್ಯ ಆಯಾಮಗಳು ಮತ್ತು ರಾಜ್ಯದಾಚೆಗಿನ ಸಂಪರ್ಕಗಳನ್ನು ಪರಿಗಣಿಸಿ ಕೇಂದ್ರ ಏಜೆನ್ಸಿಗೆ ತನಿಖೆಯನ್ನು ಹಸ್ತಾಂತರಿಸುವ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಕೊಯಮತ್ತೂರಿನ ದೇವಾಲಯವೊಂದರ ಮುಂದೆ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ 25 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
.
ಸ್ಫೋಟ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯನ್ನು ಬಳಸಲಾಗಿದೆ, ಅಲ್ಲದೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತನ ಮನೆಯಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಐವರನ್ನು ಬಂಧಿಸಲಾಗಿದೆ

Join Whatsapp
Exit mobile version