ಕೊಯಮತ್ತೂರು ಎಲ್ ಪಿಜಿ ಸ್ಫೋಟ: ತನಿಖೆಯನ್ನು ಎನ್ ಐಎಗೆ ಒಪ್ಪಿಸಿ ಎಂದ  ತಮಿಳುನಾಡು ಬಿಜೆಪಿ ಮುಖ್ಯಸ್ಥ

Prasthutha|

ಚೆನ್ನೈ: ಕೊಯಮತ್ತೂರಿನಲ್ಲಿ ಎಲ್ ಪಿಜಿ ಸಿಲಿಂಡರ್ ಮತ್ತು ಕಾರು ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಸಜೀವ ದಹನವಾದ  ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವಂತೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಆಗ್ರಹಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಣ್ಣಾಮಲೈ, ದೀಪಾವಳಿಗೆ ಒಂದು ದಿನ ಮೊದಲು ಕೊಯಮತ್ತೂರಿನಲ್ಲಿ ಕಾರು ಸ್ಫೋಟಗೊಂಡಿತ್ತು. ಕೊಯಮತ್ತೂರು ಭಯೋತ್ಪಾದಕರ ತಾಣವಾಗಿ ಮಾರ್ಪಟ್ಟಿದೆ ಎಂದು ಎನ್ಐಎ ದಾಳಿಗಳು ಮತ್ತು ಬಂಧನಗಳು ತೋರಿಸಿವೆ. ಅಪಘಾತದಲ್ಲಿ ಮೃತಪಟ್ಟ ಜೇಮ್ಶಾ ಮುಬಿನ್ ಅವರ ನಿವಾಸದಿಂದ ಪೊಲೀಸರು 50 ಕೆಜಿ ಅಮೋನಿಯಂ ನೈಟ್ರೇಟ್, ಪೊಟ್ಯಾಸಿಯಮ್, ಸೋಡಿಯಂ, ಫ್ಯೂಸ್ ವೈರ್ ಮತ್ತು 7-ವೋಲ್ಟ್ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಈವರೆಗೂ ಇದನ್ನು ಬಹಿರಂಗಪಡಿಸಿಲ್ಲ ಎಂದು ಹೇಳಿದ್ದಾರೆ.

ಈ ಘಟನೆಯನ್ನು ರಾಜ್ಯ ಪೊಲೀಸರು ‘ಆತ್ಮಹತ್ಯಾ ದಾಳಿ’ ಎಂದು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿರುವ ಅವರು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವಂತೆ ಕೋರಿ ತಮಿಳುನಾಡು ಬಿಜೆಪಿ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

Join Whatsapp