Home ಟಾಪ್ ಸುದ್ದಿಗಳು ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯ 100ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಕೊಕ್!

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯ 100ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಕೊಕ್!

ಲಖ್ನೋ:  ಉತ್ತರ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆಯನ್ನು ಮರೆ ಮಾಡಲು ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿಯ ಮೂಲಗಳ ಪ್ರಕಾರ ಬಿಜೆಪಿಯು ತಮ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿಲ್ಲದ ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿರುವ 100ಕ್ಕೂ ಹೆಚ್ಚು ಹಾಲಿ ಶಾಸಕರನ್ನು ಮತ್ತೆ ಕಣಕ್ಕಿಳಿಸದಿರಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಉತ್ತರಪ್ರದೇಶದ ಹಿರಿಯ ಬಿಜೆಪಿ ನಾಯಕರೊಬ್ಬರು ಈ ಕುರಿತು ಪ್ರತಿಕ್ರಿಯಿಸಿ, ಇದರಲ್ಲಿ ಎಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿರುವವರು ಸೇರಿದ್ದಾರೆ’ ಎಂದು ಹೇಳಿದ್ದಾರೆ.

ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು ವಿವಿಧ ಕ್ಷೇತ್ರಗಳಲ್ಲಿನ ಕಾರ್ಯಕರ್ತರ ಪ್ರತಿಕ್ರಿಯೆಯನ್ನು ಪಡೆಯಲು ಪಕ್ಷವು ಸಮೀಕ್ಷೆಯನ್ನು ಸಹ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೆಲವು ಬಿಜೆಪಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧವೇ ಧ್ವನಿ ಎತ್ತುತ್ತಿದ್ದಾರೆ. ವಿಶೇಷವಾಗಿ ಕೋವಿಡ್ ಸೋಂಕಿನ ಎರಡನೇ ಅಲೆಯ ಸಮಯದಲ್ಲಿ ದುರಾಡಳಿತದ ಬಗ್ಗೆ ಆರೋಪ ಮಾಡಿದ್ದಾರೆ. ಪ್ರಭಾವಿ ‘ಬ್ರಾಹ್ಮಣ’ ಸಮುದಾಯದಿಂದ ಬಂದಿರುವ ಕೆಲವು ಶಾಸಕರು ಕೂಡ ರಾಜ್ಯ ಸರ್ಕಾರವು ತಮ್ಮ ಸಮುದಾಯದ ಸದಸ್ಯರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದರು.

Join Whatsapp
Exit mobile version